Please enable javascript.BBC Russian" type="text/javascript">
Svoboda | Graniru | BBC Russia | Golosameriki | Facebook
ಮೋದಿ 3.0: ಮೊದಲ ಸಂಸತ್‌ ಅಧಿವೇಶನ

ಮೋದಿ 3.0: ಮೊದಲ ಸಂಸತ್‌ ಅಧಿವೇಶನ

ಜೂನ್ 9ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಹಾಗೂ ಇತರ ಸಚಿವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಹೊಸ ಸರ್ಕಾರ ರಚನೆಯಾಗಿದ್ದು, ಈ ಮೂಲಕ 18ನೇ ಲೋಕಸಭೆಯೂ ಅಸ್ತಿತ್ವಕ್ಕೆ ಬಂದಿದೆ. ಇದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 5ರಂದು 17ನೇ ಲೋಕಸಭೆಯನ್ನು ವಿಸರ್ಜಿಸಿದ್ದರು.

ಇನ್ನಷ್ಟು ಓದಿ

ಮೋದಿ 3.0: ಮೊದಲ ಸಂಸತ್‌ ಅಧಿವೇಶನ ಸುದ್ದಿ

ಜೂನ್ 9ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಹಾಗೂ ಇತರ ಸಚಿವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಹೊಸ ಸರ್ಕಾರ ರಚನೆಯಾಗಿದ್ದು, ಈ ಮೂಲಕ 18ನೇ ಲೋಕಸಭೆಯೂ ಅಸ್ತಿತ್ವಕ್ಕೆ ಬಂದಿದೆ. ಇದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 5ರಂದು 17ನೇ ಲೋಕಸಭೆಯನ್ನು ವಿಸರ್ಜಿಸಿದ್ದರು.

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ. ಹೊಸ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದು, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಮತ್ತು ಅದರ ಮೇಲೆ ಚರ್ಚೆ ನಡೆಯಲಿದೆ. ಹೊಸ ಲೋಕಸಭೆಯ ಅಧಿವೇಶನ ಆರಂಭವಾದ ಮೊದಲ ಎರಡು ದಿನಗಳಲ್ಲಿ ಅಂದರೆ ಜೂನ್ 24 ಮತ್ತು 25 ರಂದು ನೂತನ ಸದಸ್ಯತ್ವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಸದರ ಪ್ರಮಾಣ ವಚನ ಸ್ವೀಕಾರದ ಬಳಿಕ ಸದನದಲ್ಲಿ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ. ಲೋಕಸಭೆಯ ಸ್ಪೀಕರ್ ಆಯ್ಕೆಗೆ ಸರ್ಕಾರದ ಪ್ರಸ್ತಾವನೆಯನ್ನು ಪ್ರತಿಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಿದರೆ, ಆಗ ಚುನಾವಣೆ ನಡೆಯುವುದಿಲ್ಲ. ಒಂದೊಮ್ಮೆ ಪ್ರತಿಪಕ್ಷಗಳು ಸಹ ತಮ್ಮ ಕಡೆಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಆಗ ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಜೂನ್ 26 ರಂದು ಮತದಾನ ನಡೆಯಲಿದೆ.
ಚುನಾವಣೆ ಅಥವಾ ಅವಿರೋಧ ಆಯ್ಕೆ, ಯಾವುದು ನಡೆದರೂ ಜೂನ್ 26ರಂದು ಲೋಕಸಭೆಯ ನೂತನ ಸ್ಪೀಕರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆಯ ಸ್ಪೀಕರ್ ಅವರು ಸದನದ ಕಲಾಪಗಳನ್ನು ಸುಗಮವಾಗಿ ನಡೆಸುವ, ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡುವ ಜವಾಬ್ದಾರಿ ಹೊಂದಿರುತ್ತಾರೆ. ಭಾರತದ ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ ಪಾತ್ರವನ್ನು ಅನೇಕ ಪ್ರಖ್ಯಾತ ನಾಯಕರು ನಿರ್ವಹಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಲೋಕಸಭೆಯಲ್ಲಿ ಹೇಗಿದೆ ಬಲಾಬಲ?
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 543ರಲ್ಲಿ 293 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದೆ. ಈ ಮೂಲಕ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ.

ಇನ್ನೊಂದೆಡೆ ಪ್ರತಿಪಕ್ಷಗಳ 'ಐಎನ್‌ಡಿಐಎ' (ಇಂಡಿಯಾ) ಒಕ್ಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿ ತಮ್ಮ ಬಲ ಹೆಚ್ಚಿಸಿಕೊಂಡಿವೆ. ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿದ್ದು, 10 ವರ್ಷಗಳ ಬಳಿಕ ಅಧಿಕೃತ ಪ್ರತಿಪಕ್ಷವಾಗಿ ಮೂಡಿ ಬಂದಿದೆ. ಕಾಂಗ್ರೆಸ್‌ ವಿರೋಧ ಪಕ್ಷದ ನಾಯಕನನ್ನು ಜೂನ್‌ 24ರ ಮೊದಲು ಆಯ್ಕೆ ಮಾಡಬೇಕಾಗಿದೆ.