Please enable javascript.BBC Russian" type="text/javascript">
Svoboda | Graniru | BBC Russia | Golosameriki | Facebook

ಜಮೀರ್ ಅಹ್ಮದ್ ಖಾನ್‌ಗೆ ವಿಧಾನಸಭೆಗೆ ನಿಷೇಧ ಹೇರಬೇಕು! ಆರ್ ಅಶೋಕ್ ಆಗ್ರಹ

Edited byಇರ್ಷಾದ್ ಉಪ್ಪಿನಂಗಡಿ | Vijaya Karnataka Web 25 Jun 2024, 5:53 pm
Subscribe

ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರ ಮತಗಳಿಂದ ಗೆಲುವು ಸಾಧಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಜಮೀರ್ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ವಿರೋಧಕ್ಕೆ ಎಡೆಮಾಡಿಕೊಟ್ಟಿದೆ. ಈ ನಡುವೆ ಬಿಜೆಪಿ ನಾಯಕರು ಜಮೀರ್ ವಿರುದ್ಧ ಮುಗಿಬಿದ್ದಿದ್ದು, ಜಮೀರ್ ಅಹ್ಮದ್ ಖಾನ್‌ಗೆ ವಿಧಾನಸಭೆಗೆ ನಿಷೇಧ ಹೇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹ ಮಾಡಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ಹೈಲೈಟ್ಸ್‌:

  • ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರ ಮತಗಳಿಂದ ಗೆಲುವು ಸಾಧಿಸಿದ್ದಾರೆ ಎಂದ ಸಚಿವ ಜಮೀರ್ ಅಹ್ಮದ್ ಖಾನ್
  • ಸಂಸದ ಸಾಗರ್ ಖಂಡ್ರೆ ಕುರಿತಾಗಿ ಜಮೀರ್ ಅಹ್ಮದ್ ಖಾನ್ ನೀಡಿದ್ದ ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ
  • ಜಮೀರ್ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ವಿರೋಧಕ್ಕೆ ಎಡೆಮಾಡಿಕೊಟ್ಟಿದೆ. ಈ ನಡುವೆ ಬಿಜೆಪಿ ನಾಯಕರು ಜಮೀರ್ ವಿರುದ್ಧ ಮುಗಿಬಿದ್ದಿದ್ದಾರೆ
Zameer Ahmed Khan1.
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಸಂವಿಧಾನಕ್ಕೆ ಮತ್ತೊಮ್ಮೆ ಅಪಚಾರ ಎಸಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ನಲ್ಲಿ ಜಮೀರ್ ಕೊಟ್ಟ ಹೇಳಿಕೆ ಸಂವಿಧಾನದ ವಿರುದ್ಧವಾಗಿದ್ದು, ಈ ನಿಟ್ಟಿನಲ್ಲಿ ವಿಧಾನಸಭೆಗೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ತಮ್ಮ ತುಷ್ಟೀಕರಣ ರಾಜಕಾರಣದ ತೃಷೆಗಾಗಿ ಸಾಂವಿಧಾನಿಕ ಹುದ್ದೆಗಳಿಗೆ ಪದೇ ಪದೇ ಅಪಮಾನ ಮಾಡುವ ಚಾಳಿ ಬೆಳೆಸಿಕೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಸಂವಿಧಾನಕ್ಕೆ ಅಪಚಾರ ಮತ್ತೊಮ್ಮೆ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೀದರ್‌ನಲ್ಲಿ ಸಾಗರ್ ಖಂಡ್ರೆ ಮುಸ್ಲಿಮರ ಮತಗಳಿಂದ ಗೆದ್ದಿದ್ದಾರೆ! ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ
ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ತಲೆಬಾಗಬೇಕು ಎಂದು ಸ್ಪೀಕರ್ ಹುದ್ದೆಗೆ ಅಪಚಾರ ಎಸಗಿದ್ದ ಜಮೀರ್, ಈಗ ಮುಸ್ಲಿಮರ ಕೆಲಸವನ್ನ ತಲೆಬಾಗಿ ಮಾಡಬೇಕು ಎಂದು ದುರಹಂಕಾರದ ಮಾತುಗಳನ್ನು ಆಡುವ ಮೂಲಕ ಸಚಿವ ಸ್ಥಾನಕ್ಕೆ ಅಪಮಾನ ಮಾಡಿದ್ದಾರೆ.

ಮೊದಲು ಮಾಡಿದ ತಪ್ಪಿಗೇ ಈವರೆಗೆ ಜನತೆಯ ಕ್ಷಮೆ ಕೇಳದ ಜಮೀರ್‌ ಅಹ್ಮದ್‌ ಈಗ ಮತ್ತೊಮ್ಮೆ ದರ್ಪ ಪ್ರದರ್ಶನ ಮಾಡಿರುವುದು ಅವರ ಸಂಸ್ಕೃತಿ ತೋರಿಸುತ್ತದೆ. ಇಂತಹ ಸಂಸ್ಕೃತಿ ಹೀನರು, ಸಂವಿಧಾನ ವಿರೋಧಿಗಳು, ವಿಧಾನಸಭೆ ಪ್ರವೇಶಕ್ಕೇ ಅನರ್ಹರಾಗಿದ್ದು, ಜಮೀರ್‌ ಅವರಿಗೆ ನಿಷೇಧ ಹೇರಬೇಕು ಎಂದು ಸ್ಪೀಕರ್‌ ಅವರಲ್ಲಿ ಮನವಿ ಮಾಡುತ್ತೇನೆ.

ಏನು ವಿವಾದ?

ಬೀದರ್ ನ ಪಾಟೀಲ್ ಫಂಕ್ಷನ್ ಹಾಲ್ ನಲ್ಲಿ ನಡೆದ ವಕ್ಫ್ ಅದಾಲತ್ ಕಾರ್ಯಕ್ರಮದಲ್ಲಿ ಮೃತರ ಅಂತ್ಯ ಸಂಸ್ಕಾರಕ್ಕೆ ದಫನ್‌ ಭೂಮಿ ಇಲ್ಲ ಎಂದು ಸಾರ್ವಜನಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಿಂದಿನಿಂದಲೂ ಅರಣ್ಯ ಪ್ರದೇಶದ ಜಮೀನಿನಲ್ಲೇ ಶವ ಸಂಸ್ಕಾರ ಮಾಡುತ್ತಾ ಬಂದಿದ್ದು. ಈಗ ಅವಕಾಶ ಕಲ್ಪಿಸಿ ಎಂದು ವ್ಯಕ್ತಿಯೊಬ್ಬರು ಸಭೆಯಲ್ಲಿ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಜಮೀರ್ ಅಹ್ಮದ್ ಖಾನ್ ಅರಣ್ಯ ಸಚಿವರು ಪರಿಚಿತರು ಹೀಗಾಗಿ ಈ ಬಗ್ಗೆ ಅವರ ಜೊತೆ ಚರ್ಚೆ ಮಾಡಿ ಪರಿಹಾರ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದರು.

ಈ ವೇಳೆ ಸಾರ್ವಜನಿಕರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಜಮೀರ್ ಅಹ್ಮದ್ ಖಾನ್, ಬೀದರ್‌ನಲ್ಲಿ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಮುಸ್ಲಿಮರ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೆಲಸ ಮಾಡಿ ಕೊಡಬೇಕು ಎಂದು ಹೇಳಿದ್ದರು. ಜಮೀರ್ ಅಹ್ಮದ್ ಖಾನ್ ಅವರು ಬೀದರ್‌ನಲ್ಲಿ ಆಡಿದ್ದ ಮಾತು ಇದೀಗ ವಿವಾದಕ್ಕೆ ಕಾರಣವಾಗಿದೆ.
ಇರ್ಷಾದ್ ಉಪ್ಪಿನಂಗಡಿ
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ